ಕೀರ್ತನೆ 146
1 ಯೆಹೋವ ದೇವರನ್ನು ಸ್ತುತಿಸಿರಿ.
ನನ್ನ ಪ್ರಾಣವೇ, ಯೆಹೋವ ದೇವರನ್ನು ಸ್ತುತಿಸು.
2 ನಾನು ಬದುಕುವವರೆಗೂ ಯೆಹೋವ ದೇವರನ್ನು ಸ್ತುತಿಸುವೆನು;
ನಾನು ಇರುವವರೆಗೂ ನನ್ನ ದೇವರನ್ನು ಸ್ತುತಿಸುವೆನು.
3 ಅಧಿಪತಿಗಳಲ್ಲಿಯೂ ರಕ್ಷಿಸಲಾಗದ
ಮಾನವರಲ್ಲಿಯೂ ಭರವಸವಿಡಬೇಡಿರಿ.
4 ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ,
ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ.
5 ಯಾಕೋಬನ ದೇವರನ್ನು ತಮ್ಮ ಸಹಾಯಕರಾಗಿ ಮಾಡಿಕೊಂಡವನು ಧನ್ಯನು;
ಅವನು ತನ್ನ ದೇವರಾದ ಯೆಹೋವ ದೇವರ ಮೇಲೆ ನಿರೀಕ್ಷೆ ಇಡುವನು.
6 ಆಕಾಶವನ್ನೂ, ಭೂಮಿಯನ್ನೂ,
ಸಮುದ್ರವನ್ನೂ, ಅವುಗಳಲ್ಲಿರುವ ಎಲ್ಲವನ್ನೂ
ಉಂಟುಮಾಡಿದ ದೇವರೇ ಎಂದೆಂದಿಗೂ ನಂಬಿಗಸ್ತರು.
7 ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ,
ಹಸಿದವರಿಗೆ ಆಹಾರವನ್ನು ಕೊಡುತ್ತಾರೆ.
ಯೆಹೋವ ದೇವರು ಸೆರೆಯವರನ್ನು ಬಿಡಿಸುತ್ತಾರೆ.
8 ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ.
ಅವರು ದೀನರನ್ನು ಎತ್ತುತ್ತಾರೆ.
ನೀತಿವಂತರನ್ನು ಪ್ರೀತಿಸುತ್ತಾರೆ.
9 ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ.
ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ.
ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.
10 ಚೀಯೋನೇ, ನಿಮ್ಮ ದೇವರಾದ ಯೆಹೋವ ದೇವರು ತಲತಲಾಂತರಕ್ಕೂ,
ಸರ್ವ ಸಂತತಿಗಳವರೆಗೂ ಆಳಿಕೆ ಮಾಡುತ್ತಾರೆ.
ಯೆಹೋವ ದೇವರಿಗೆ ಸ್ತೋತ್ರ.