54
ವೈರಿಗಳಿಂದ ರಕ್ಷಿಸಬೇಕೆಂದು ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ.
ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು;
ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು;
ನನ್ನ ಮಾತುಗಳಿಗೆ ಕಿವಿಗೊಡು.
* 54:3 ಅಥವಾ ಅನ್ಯರು.ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ;
ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ.
ಅವರು ದೇವರನ್ನು ಲಕ್ಷಿಸುವುದೇ ಇಲ್ಲ.
ಸೆಲಾ
ಇಗೋ, ದೇವರೇ ನನಗೆ ಸಹಾಯಕನು;
54:4 ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ.ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ.
ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು;
ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ,
ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.

*54:3 54:3 ಅಥವಾ ಅನ್ಯರು.

54:4 54:4 ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ.