14
ಇನ್ನೊಬ್ಬರಿಗೆ ತೀರ್ಪುಮಾಡಬೇಡಿರಿ
1ಕೊರಿ 8-10
1 * 14:1 ರೋಮಾ. 15:1; 1 ಕೊರಿ 8:9-11; 9:22ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. 2 ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ. 3 ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ? 4 † 14:4 ಯಾಕೋಬ 4:12ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ. 5 ‡ 14:5 ಗಲಾ. 4:10ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; § 14:5 ರೋಮಾ. 14:23ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ. 6 ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; * 14:6 1 ಕೊರಿ 10:30,31; 1 ತಿಮೊ. 4:3,4ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ. 7 † 14:7 2 ಕೊರಿ 5:15; ಗಲಾ. 2:20; 1 ಪೇತ್ರ 4:2ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ, 8 ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ‡ 14:8 ಫಿಲಿ. 1:20ಬದುಕಿದರೂ ಸತ್ತರೂ ನಾವು ಕರ್ತನವರೇ. 9 ಯಾಕೆಂದರೆ § 14:9 ಅ. ಕೃ. 10:42; ಪ್ರಕ 20:12ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು. 10 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? * 14:10 2 ಕೊರಿ 5:10ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು. 11 ಪವಿತ್ರ ಶಾಸ್ತ್ರದಲ್ಲಿ: † 14:11 ಯೆಶಾ 45:23; ಫಿಲಿ. 2:10,11“ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ. 12 ಹೀಗಿರಲಾಗಿ ‡ 14:12 ಮತ್ತಾ 12:36; 16:27; 1 ಪೇತ್ರ 4:5ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು. 13 ಆದಕಾರಣ, ಇನ್ನು ಮೇಲೆ § 14:13 ಮತ್ತಾ 7:1ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ. 14 * 14:14 ರೋಮಾ. 14:2; 20ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ † 14:14 1 ಕೊರಿ 8:7,10ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.
15 ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ‡ 14:15 1 ಕೊರಿ 8:11; ರೋಮಾ. 14:20ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು. 16 ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು. 17 ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ § 14:17 1 ಕೊರಿ 6:9ನೀತಿಯೂ, * 14:17 ಗಲಾ. 5:22ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ. 18 ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ. 19 ಆದ್ದರಿಂದ ನಾವು † 14:19 1 ಕೊರಿ 7:15; 2 ತಿಮೊ. 2:22; ಇಬ್ರಿ. 12:4ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ. 20 ‡ 14:20 ರೋಮಾ. 14:15ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. § 14:20 ತೀತ 115; ರೋಮಾ. 14:14ಎಲ್ಲಾ ಪದಾರ್ಥಗಳೂ ಶುದ್ಧವೇ; * 14:20 1 ಕೊರಿ 8:9,13ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು. 21 ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು. 22 ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. † 14:22 1 ಯೋಹಾ 3:21ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು. 23 ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ‡ 14:23 ಸಂಶಯಪಟ್ಟು ಮಾಡುವುದೆಲ್ಲಾ ಪಾಪನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.
*14:1 14:1 ರೋಮಾ. 15:1; 1 ಕೊರಿ 8:9-11; 9:22
†14:4 14:4 ಯಾಕೋಬ 4:12
‡14:5 14:5 ಗಲಾ. 4:10
§14:5 14:5 ರೋಮಾ. 14:23
*14:6 14:6 1 ಕೊರಿ 10:30,31; 1 ತಿಮೊ. 4:3,4
†14:7 14:7 2 ಕೊರಿ 5:15; ಗಲಾ. 2:20; 1 ಪೇತ್ರ 4:2
‡14:8 14:8 ಫಿಲಿ. 1:20
§14:9 14:9 ಅ. ಕೃ. 10:42; ಪ್ರಕ 20:12
*14:10 14:10 2 ಕೊರಿ 5:10
†14:11 14:11 ಯೆಶಾ 45:23; ಫಿಲಿ. 2:10,11
‡14:12 14:12 ಮತ್ತಾ 12:36; 16:27; 1 ಪೇತ್ರ 4:5
§14:13 14:13 ಮತ್ತಾ 7:1
*14:14 14:14 ರೋಮಾ. 14:2; 20
†14:14 14:14 1 ಕೊರಿ 8:7,10
‡14:15 14:15 1 ಕೊರಿ 8:11; ರೋಮಾ. 14:20
§14:17 14:17 1 ಕೊರಿ 6:9
*14:17 14:17 ಗಲಾ. 5:22
†14:19 14:19 1 ಕೊರಿ 7:15; 2 ತಿಮೊ. 2:22; ಇಬ್ರಿ. 12:4
‡14:20 14:20 ರೋಮಾ. 14:15
§14:20 14:20 ತೀತ 115; ರೋಮಾ. 14:14
*14:20 14:20 1 ಕೊರಿ 8:9,13
†14:22 14:22 1 ಯೋಹಾ 3:21
‡14:23 14:23 ಸಂಶಯಪಟ್ಟು ಮಾಡುವುದೆಲ್ಲಾ ಪಾಪ