10
ಬಲಿಷ್ಠನಾದ ದೂತನು ಮತ್ತು ಚಿಕ್ಕ ಸುರುಳಿಯು
ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. * 10:1 ಯೆಹೆ. 1:28:ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. 10:1 ಪ್ರಕ 1:16; ಮತ್ತಾ 17:2:ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. 10:1 ಪ್ರಕ 1:15:ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು. § 10:2 ಪ್ರಕ 10:8-10:ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು, * 10:3 ಯೋವೇ. 3:16; ಆಮೋ. 1:2:ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ 10:4 ಮೂಲ: ಅವುಗಳಿಗೆ ಮುದ್ರೆಹಾಕು; ದಾನಿ. 8:26; 12:4, 9; ಪ್ರಕ 22:10:ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.
ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು 10:5 ಆದಿ 14:22:ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ, § 10:6 ಪ್ರಕ 4:11:ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, * 10:6 ಪ್ರಕ 4:9:ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ 10:6 ದಾನಿ. 12:7:ಆಣೆಯಿಟ್ಟು, 10:6 ಪ್ರಕ 12:12; 16:17; 21:6; ದಾನಿ. 12:7:“ಇನ್ನು ತಡಮಾಡದೆ, § 10:7 ಪ್ರಕ 11:15:ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು * 10:7 ಆಮೋ. 3:7:ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.
ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು.
ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, 10:9 ಯೆಹೆ. 2:4, 3:3; ಯೆರೆ 15:16:ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು. 10 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು. 11 ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.

*10:1 10:1 ಯೆಹೆ. 1:28:

10:1 10:1 ಪ್ರಕ 1:16; ಮತ್ತಾ 17:2:

10:1 10:1 ಪ್ರಕ 1:15:

§10:2 10:2 ಪ್ರಕ 10:8-10:

*10:3 10:3 ಯೋವೇ. 3:16; ಆಮೋ. 1:2:

10:4 10:4 ಮೂಲ: ಅವುಗಳಿಗೆ ಮುದ್ರೆಹಾಕು; ದಾನಿ. 8:26; 12:4, 9; ಪ್ರಕ 22:10:

10:5 10:5 ಆದಿ 14:22:

§10:6 10:6 ಪ್ರಕ 4:11:

*10:6 10:6 ಪ್ರಕ 4:9:

10:6 10:6 ದಾನಿ. 12:7:

10:6 10:6 ಪ್ರಕ 12:12; 16:17; 21:6; ದಾನಿ. 12:7:

§10:7 10:7 ಪ್ರಕ 11:15:

*10:7 10:7 ಆಮೋ. 3:7:

10:9 10:9 ಯೆಹೆ. 2:4, 3:3; ಯೆರೆ 15:16: