೨೫
೧ ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು,
೨ “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು,
ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.
೩ ಆತನ ಸೈನ್ಯಗಳಿಗೆ ಲೆಕ್ಕವಿದೆಯೋ?
ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?
೪ ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ?
ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?
೫ ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ,
ನಕ್ಷತ್ರಗಳೂ ಶುದ್ಧವಲ್ಲ.
೬ ಹೀಗಿರುವಲ್ಲಿ ನರ ಹುಳವು ಅಶುದ್ಧವಾದದ್ದು!
ನರ ಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”