೧೪
ಇನೊಬ್ಬರಿಗೆ ತೀರ್ಪುಮಾಡಬೇಡಿರಿ
(1 ಕೊರಿ. 8—10)
೧  * ರೋಮಾ. 15:1; 1 ಕೊರಿ. 8:9-11; 9:22ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ತೀರ್ಪುಮಾಡಬೇಡಿರಿ. ೨ ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ. ೩ ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ? ೪  ಯಾಕೋಬ 4:12ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ. ೫  ಗಲಾ. 4:10ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; § ರೋಮಾ. 14:23ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ. ೬ ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; * 1 ಕೊರಿ. 10:30,31; 1 ತಿಮೊ. 4:3,4ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ. ೭  2 ಕೊರಿ. 5:15; ಗಲಾ. 2:20; 1 ಪೇತ್ರ 4:2ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ, ೮ ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಫಿಲಿ. 1:20ಬದುಕಿದರೂ ಸತ್ತರೂ ನಾವು ಕರ್ತನವರೇ. ೯ ಯಾಕೆಂದರೆ § ಅ. ಕೃ. 10:42; ಪ್ರಕ. 20:12ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು. ೧೦ ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? * 2 ಕೊರಿ. 5:10ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು. ೧೧ ಪವಿತ್ರ ಶಾಸ್ತ್ರದಲ್ಲಿ: ಯೆಶಾ. 45:23; ಫಿಲಿ. 2:10,11ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ ಎಂದು ಬರೆದಿದೆ. ೧೨ ಹೀಗಿರಲಾಗಿ ಮತ್ತಾ 12:36; 16:27; 1 ಪೇತ್ರ 4:5ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು. ೧೩ ಆದಕಾರಣ, ಇನ್ನು ಮೇಲೆ § ಮತ್ತಾ 7:1ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ. ೧೪  * ರೋಮಾ. 14:2; 20ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ 1 ಕೊರಿ. 8:7,10ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.
೧೫ ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ 1 ಕೊರಿ. 8:11; ರೋಮಾ. 14:20ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು. ೧೬ ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು. ೧೭ ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ § 1 ಕೊರಿ. 6:9ನೀತಿಯೂ, * ಗಲಾ. 5:22ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ. ೧೮ ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ. ೧೯ ಆದ್ದರಿಂದ ನಾವು 1 ಕೊರಿ. 7:15; 2 ತಿಮೊ. 2:22; ಇಬ್ರಿ. 12:4ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ. ೨೦  ರೋಮಾ. 14:15ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. § ತೀತ 115; ರೋಮಾ. 14:14ಎಲ್ಲಾ ಪದಾರ್ಥಗಳೂ ಶುದ್ಧವೇ; * 1 ಕೊರಿ. 8:9,13ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು. ೨೧ ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು. ೨೨ ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. 1 ಯೋಹಾ 3:21ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು. ೨೩ ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ಸಂಶಯಪಟ್ಟು ಮಾಡುವುದೆಲ್ಲಾ ಪಾಪನಂಬಿಕೆಯಿಂದ ರೂಪುಗೊಳ್ಳದಿರುವುದೆಲ್ಲವೂ ಪಾಪವೇ ಆಗಿದೆ.

*೧೪:೧ ರೋಮಾ. 15:1; 1 ಕೊರಿ. 8:9-11; 9:22

೧೪:೪ ಯಾಕೋಬ 4:12

೧೪:೫ ಗಲಾ. 4:10

§೧೪:೫ ರೋಮಾ. 14:23

*೧೪:೬ 1 ಕೊರಿ. 10:30,31; 1 ತಿಮೊ. 4:3,4

೧೪:೭ 2 ಕೊರಿ. 5:15; ಗಲಾ. 2:20; 1 ಪೇತ್ರ 4:2

೧೪:೮ ಫಿಲಿ. 1:20

§೧೪:೯ ಅ. ಕೃ. 10:42; ಪ್ರಕ. 20:12

*೧೪:೧೦ 2 ಕೊರಿ. 5:10

೧೪:೧೧ ಯೆಶಾ. 45:23; ಫಿಲಿ. 2:10,11

೧೪:೧೨ ಮತ್ತಾ 12:36; 16:27; 1 ಪೇತ್ರ 4:5

§೧೪:೧೩ ಮತ್ತಾ 7:1

*೧೪:೧೪ ರೋಮಾ. 14:2; 20

೧೪:೧೪ 1 ಕೊರಿ. 8:7,10

೧೪:೧೫ 1 ಕೊರಿ. 8:11; ರೋಮಾ. 14:20

§೧೪:೧೭ 1 ಕೊರಿ. 6:9

*೧೪:೧೭ ಗಲಾ. 5:22

೧೪:೧೯ 1 ಕೊರಿ. 7:15; 2 ತಿಮೊ. 2:22; ಇಬ್ರಿ. 12:4

೧೪:೨೦ ರೋಮಾ. 14:15

§೧೪:೨೦ ತೀತ 115; ರೋಮಾ. 14:14

*೧೪:೨೦ 1 ಕೊರಿ. 8:9,13

೧೪:೨೨ 1 ಯೋಹಾ 3:21

೧೪:೨೩ ಸಂಶಯಪಟ್ಟು ಮಾಡುವುದೆಲ್ಲಾ ಪಾಪ